![](https://kannadadunia.com/wp-content/uploads/2023/02/fire-break.jpg)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.
ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದ್ದು, ಲ್ಯಾಪ್ ಟಾಪ್ ಕಚೇರಿಯ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಲ್ಯಾಪ್ ಟಾಪ್, ಕಂಪೂಟರ್ ಗಳು ಸುಟ್ಟು ಭಸ್ಮವಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.