
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕೆರೆಪಾಳ್ಯದ ಬೆಟ್ಟದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ನೆಲಮಂಗಲದಲ್ಲಿ ಇತ್ತೀಚೆಗಷ್ಟೇ 3 ಚಿರತೆಗಳನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದರು. ಈ ಹಿಂದೆ ಕಂಬಾಳು, ಗೊಲ್ಲರಹಟ್ಟಿಯಲ್ಲಿ 3 ಚಿರತೆ ಕಾಣಿಸಿಕೊಂಡಿದ್ದವು.
ಚಿರತೆ ದಾಳಿಗೆ ಮಹಿಳೆ ಬಲಿಯಾದ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿತ್ತು. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿತ್ತು. ಕರಿಯಮ್ಮ (55) ಚಿರತೆ ದಾಳಿಗೆ ಬಲಿಯಾದ ಮಹಿಳೆ.ರುಂಡವನ್ನು ಚಿರತೆ ತಿಂದಿದ್ದರಿಂದ ಮುಂಡ ಮಾತ್ರ ಪತ್ತೆ ಆಗಿತ್ತು. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಬಳಿಕ ಅರಣ್ಯಾಧಿಕಾರಿಗಳು ನರಭಕ್ಷಕ ಚಿರತೆಯನ್ನು ಸೆರೆ ಹಿಡಿದಿದ್ದರು. ಒಟ್ಟಿನಲ್ಲಿ ಕಳೆದ ಕೆಲವು ದಿನಗಳಲ್ಲಿ 3 ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ.