ಮೈಸೂರು : ಮೈಸೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಮೈಸೂರಿನ ರಾಮಕೃಷ್ಣ ನಗರದ ಲಿಂಗಾಬುದ್ದಿ ಕೆರೆಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.
ಮುಂಜಾನೆ ವಾಕಿಂಗ್ ಗೆ ಬಂದ ಸಾರ್ವಜನಿಕರಿಗೆ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಚಿರತೆ ಸೆರೆಹಿಡಿಯುವುದಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇತ್ತೀಚೆಗಷ್ಟೇ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು ಸತತವಾಗಿ ಶೋಧ ನಡೆಸಿದರೂ ಚಿರತೆ ಪತ್ತೆಯಾಗಿರಲಿಲ್ಲ.