ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಿಯಕರನೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೆಲ ವರ್ಷಗಳಿಂದ ಲಿವೀಂಗ್ ಟುಗೇದರ್ ನಲ್ಲಿದ್ದ ಕೇರಳ ಮೂಲದ ವೈಷ್ಣವ್ ಮತ್ತು ದೇವಿ ಮದುವೆ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಬಳಿಕ ಪ್ರಿಯಕರ ವೈಷ್ಣವ್ ದೇವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಇಬ್ಬರು ನ್ಯೂಮೈಕೋ ಲೇಔಟ್ ನಲ್ಲಿ ಲಿವಿಂಗ್ ಟುಗೇದರ್ ನಲ್ಲಿದ್ದರು. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.