ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಕೇವಲ ನಾಲ್ಕು ದಿನ ಬಾಕಿ ಉಳಿದಿದೆ..ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭಕ್ಕೆ ಮುಂಚಿತವಾಗಿ ಆಚರಣೆಗಳ ಭಾಗವಾಗಿ ರಾಮ್ ಲಲ್ಲಾ ವಿಗ್ರಹವನ್ನು ಗರ್ಭಗುಡಿಯೊಳಗೆ ಸ್ಥಾಪಿಸಲಾಗಿದೆ.
ಇದೀಗ ರಾಮಮಂದಿರ ಟ್ರಸ್ಟ್ ಕೃಷ್ಣಶಿಲೆಯಲ್ಲಿ ಕೆತ್ತಿದ ಬಾಲರಾಮನ ಹೊಸ ಫೋಟೋಗಳನ್ನು ಬಿಡುಗಡೆ ಮಾಡಿದೆ.
2024 ರ ಜನವರಿ 22 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮ ದೇವಾಲಯದ ಪ್ರಾಣ ಪ್ರತಿಷ್ಠಾ ಅನ್ನು ನೆರವೇರಿಸಲಿದ್ದಾರೆ. ಜನವರಿ 22 ರಂದು ರಾಮ ಮಂದಿರದ ಪ್ರತಿಷ್ಠಾಪನೆಗೆ 84 ಸೆಕೆಂಡುಗಳ ಸೂಕ್ಷ್ಮ ಸಮಯವಿರುತ್ತದೆ. ಈ ಮುಹೂರ್ತವು 12.29 ನಿಮಿಷ 8 ಸೆಕೆಂಡುಗಳಿಂದ ಪ್ರಾರಂಭವಾಗುತ್ತದೆ ಮತ್ತು ಇದು 12.30 ನಿಮಿಷ 32 ಸೆಕೆಂಡುಗಳಲ್ಲಿ ಕೊನೆಗೊಳ್ಳುತ್ತದೆ.