ಮೈಸೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನಲ್ಲಿ ಹಾಡಹಗಲೇ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ರಾಬರಿ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಜಯಪುರ ಹೋಬಳಿಯ ಹಾರೋಹಳ್ಳಿಯಲ್ಲಿ ಈ ಘಟನೆ ನಡೆದಿದೆ.ಮುಸುಕುಧಾರಿಗಳ ಗ್ಯಾಂಗ್ ಹಾಡಹಗಲೇ ಈ ಕೃತ್ಯ ನಡೆಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.ಕೇರಳದ ಮೂಲದ ಉದ್ಯಮಿಯ ಕಾರು, ಹಣ, ಹಾಗೂ ಮೊಬೈಲ್ ಕಿತ್ತುಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಸ್ತೆಯಲ್ಲಿ ಬರುತ್ತಿದ್ದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರು ಸಮೇತ ಆತನ ಬಳಿಯಿದ್ದ ಹಣ, ಮೊಬೈಲ್ ಕಸಿದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ರಾಜ್ಯದಲ್ಲಿ ಸಾಲು ಸಾಲು ಬ್ಯಾಂಕ್, ಎಟಿಎಂ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಮೈಸೂರಿನಲ್ಲಿ ಮತ್ತೊಂದು ದರೋಡೆ ನಡೆದಿದೆ.