ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ.
ಕೋರಮಂಗಲದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಮಹಿಳೆಯರೊಬ್ಬರನ್ನು ವ್ಯಕ್ತಿ ಹಳೇ ಪರಿಚಯ ನೆಪದಲ್ಲಿ ಭೇಟಿ ಮಾಡಿ ನಂತರ ಕರೆದೊಯ್ದು ಮೂವರ ಜೊತೆ ಸೇರಿಕೊಂಡು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಪರಿಚಯ ಇದ್ದಂತೆ ಮಾತನಾಡಿ ನಂತರ ಹೋಟೆಲ್ ಗೆ ಊಟಕ್ಕಂತ ಕರೆದುಕೊಂಡು ಹೋಗಿ ಹೋಟೆಲ್ ನ ಟೆರೇಸ್ ಮೇಲೆ ಅತ್ಯಾಚಾರ ಎಸಗಲಾಗಿದೆ. ನಂತರ ಮೊಬೈಲ್, ಪರ್ಸ್ ಕಿತ್ತುಕೊಂಡು ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗಿದೆ.ಘಟನೆ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.