ಬೆಂಗಳೂರು : ನಟ ದರ್ಶನ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಗನ್ ಲೈಸೆನ್ಸ್ ರದ್ದು ಮಾಡಲಾಗಿದೆ.
ಆರ್ ಆರ್ ನಗರ ಠಾಣೆಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ದರ್ಶನ್ ಬಳಿಯಿರುವ 2 ಗನ್ ಗಳನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಆದ್ದರಿಂದ ನಿಮ್ಸ್ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದರು.
ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಪತ್ರದ ಮೂಲಕ ಮನವಿ ಮಾಡಿದ್ದರು. ಆದರೆ ನಟ ದರ್ಶನ್ ಅವರ ಮನವಿ ತಿರಸ್ಕರಿಸಿದ ಪೊಲೀಸರು ಗನ್ ಲೈಸೆನ್ಸ್ ರದ್ದು ಮಾಡಿದ್ದಾರೆ.