ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಮೆಟ್ರೋ ಬೆನ್ನಲ್ಲೇ ಆಟೋ ದರ ಕೂಡ ಏರಿಕೆಯಾಗುವ ಸಾಧ್ಯತೆಯಿದೆ.
ಹೌದು, 1.ಕಿಮೀಗೆ 5 ಹಾಗೂ 2 ಕಿಮೀಗೆ 10 ರೂ ಹೆಚ್ಚಳಕ್ಕೆ ಆಟೋ ಚಾಲಕರು ಮನವಿ ಮಾಡಿದ್ದಾರೆ. ಮಾರ್ಚ್ 12 ರಂದು ಡಿಸಿಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಆಟೋ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಮೆಟ್ರೋ, ಬಸ್ ಟಿಕೆಟ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದ್ದು, ಇದೀಗ ಆಟೋ ಚಾಲಕರು ಆಟೋ ಪ್ರಯಾಣ ದರವನ್ನು ಏರಿಸುವಂತೆ ಪಟ್ಟು ಹಿಡಿದಿದ್ದಾರೆ.ಶೀಘ್ರದಲ್ಲಿಯೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಟೋ ಪ್ರಯಾಣ ದರ ಕೂಡ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಒಟ್ಟಾರೆ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಿದ್ದು, ಮಧ್ಯಮ ವರ್ಗದ ಜನರಿಗೆ ಬದುಕು ನಡೆಸುವುದು ದುಸ್ತರವಾಗಿದೆ.