ಹೈದರಾಬಾದ್ : ಮಂಗಳವಾರ ರಾತ್ರಿ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರಿಗೆ ಟಿವಿ ಮೈಕ್ ನಿಂದ ಪತ್ರಕರ್ತರೊಬ್ಬರಿಗೆ ಥಳಿಸಿದ ಹಿರಿಯ ನಟ ಮಂಚು ಮೋಹನ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಸೆಕ್ಷನ್ ಬಿಎನ್ಎಸ್ 109 ರ ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.
ಈ ಮೊದಲು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 118 (1) (ಅಪಾಯಕಾರಿ ಆಯುಧಗಳು ಅಥವಾ ವಸ್ತುಗಳನ್ನು ಬಳಸಿ ಗಾಯಗೊಳಿಸುವುದು) ಅಡಿಯಲ್ಲಿ ಪಹಾಡಿಶರೀಫ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದರ ನಡುವೆ ಕಾನೂನು ಅಭಿಪ್ರಾಯವನ್ನು ತೆಗೆದುಕೊಂಡು ಬಿಎನ್ಎಸ ಸೆಕ್ಷನ್ 109 ಅಡಿ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.
Debbalu padatayi raaja 🔥🏃#ManchuManoj #ManchuMohanbabu #MohanBabu #ManchuVishnu pic.twitter.com/Hh6kNzFaQN
— Ismartuuuu (@BaneExtraluu) December 10, 2024
ಮೋಹನ್ ಬಾಬು ಅವರ ಕುಟುಂಬದಲ್ಲಿನ ಕಲಹದ ವಿಚಾರಕ್ಕೆ ಸಂಬಂಧಿಸಿದಂತೆ ಮೋಹನ್ ಬಾಬು ಅವರ ಪ್ರತಿಕ್ರಿಯೆ ಕೇಳಲು ಬಂದ ಸುದ್ದಿಗಾರನ ಮೇಲೆ ಮೋಹನ್ ಬಾಬು ಮೈಕ್ ಕಿತ್ತುಕೊಂಡು ಹಲ್ಲೆ ನಡೆಸಿದ್ದರು.