ಬೆಂಗಳೂರು : ಶೀಘ್ರದಲ್ಲೇ ಹಾಲಿನ ದರ ಲೀಟರ್ ಗೆ 5 ರೂಗೆ ಏರಿಕೆ ಮಾಡಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರದಲ್ಲಿ ಮಾತನಾಡಿದ ಅವರು ಹಾಲಿನ ದರ ಲೀಟರ್ ಗೆ 5 ರೂ ಏರಿಕೆ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ. ರೈತರಿಂದ ಖರೀದಿಸುವ ಹಾಲಿನ ದರವನ್ನು 5 ರೂ ಹೆಚ್ಚಳ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಶೀಘ್ರದಲ್ಲೇ ಹಾಲಿನ ದರ ಲೀಟರ್ ಗೆ 5 ರೂಗೆ ಏರಿಕೆ ಮಾಡಲಾಗುತ್ತದೆ ಎಂದರು.
ಹೆಚ್ಚಳವಾದ 5 ರೂಪಾಯಿ ಪೂರ್ತಿಯಾಗಿ ಹಾಲು ಉತ್ಪಾದಕರಿಗೇ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ ವೆಂಟಕೇಶ್ ಸ್ಪಷ್ಟಪಡಿಸಿದರು. ಬೆಲೆ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಕೂಡ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಬೆಲೆ ಹೆಚ್ಚಳ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ..!
ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.