ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಭಾವ್ಯ ಮೈತ್ರಿಗಾಗಿ ರಾಷ್ಟ್ರೀಯ ಲೋಕ ದಳ (ಆರ್ಎಲ್ಡಿ) ಮುಖಂಡ ಜಯಂತ್ ಚೌಧರಿ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಉತ್ತರ ಪ್ರದೇಶದ ಕೈರಾನಾ, ಬಾಗ್ಪತ್, ಮಥುರಾ ಮತ್ತು ಅಮ್ರೋಹಾ ಎಂಬ ನಾಲ್ಕು ಲೋಕಸಭಾ ಸ್ಥಾನಗಳನ್ನು ಬಿಜೆಪಿ ಆರ್ ಎಲ್ ಡಿಗೆ ನೀಡಲಿದೆ.
ಜಯಂತ್ ಚೌಧರಿ ಮಂಗಳವಾರ ದೆಹಲಿಯಲ್ಲಿ ಹಿರಿಯ ಬಿಜೆಪಿ ನಾಯಕರನ್ನು ಭೇಟಿಯಾದರು ಎಂದು ಮೂಲಗಳು ತಿಳಿಸಿವೆ, ಇದು ನಿರ್ಣಾಯಕ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಎರಡೂ ಪಕ್ಷಗಳು ಕೈಜೋಡಿಸಲು ಯೋಚಿಸುತ್ತಿವೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.