ಬೆಂಗಳೂರು : ಪಿಜಿಯಲ್ಲಿ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿ ನಡೆದಿದೆ.
ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿನಿಯನ್ನು ತನ್ವೀರ್ ಎಂದು ಗುರುತಿಸಲಾಗಿದೆ. ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.