ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, 12 ನೇ ಮಹಡಿಯಿಂದ ಜಿಗಿದು 18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಹೆಣ್ಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ವಿದ್ಯಾರ್ಥಿಯ ಗುರುತು ಪತ್ತೆಯಾಗಿಲ್ಲ. ಕಾಲೇಜು ಬದಲಾವಣೆ ವಿಚಾರಕ್ಕೆ ಪೋಷಕರ ಜೊತೆ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.