ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, ಅಪಾರ್ಟ್ ಮೆಂಟ್ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದಲ್ಲಿ ನಡೆದಿದೆ.
RMZ ಗ್ಯಾಲರಿಯಾ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. 16 ನೇ ಫ್ಲೋರ್ ನಿಂದ ಜಿಗಿದು ರವಿಕುಮಾರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಯಲಹಂಕ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.