ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿಯಾದ ಘಟನೆ ನಡೆದಿದೆ.
ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ತನಿಷಾ ಚೌಧರಿ ಎಂದು ಗುರುತಿಸಲಾಗಿದೆ. ಪತಿ ಅರುಣ್ ಚೌಧರಿ ಕುಟುಂಬದವರು ನೀಡಿದ ವರದಕ್ಷಿಣೆ ಕಿರುಕುಳಕ್ಕೆ ಈಕೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ ನೇಣು ಹಾಕಿ ಇದು ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ ಎಂದು ತನಿಷಾ ಕುಟುಂಬದವರು ಆರೋಪ ಮಾಡಿದ್ದಾರೆ.ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.