ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, 24 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಿನ್ನೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೋನಿಯಾ (24) ಎಂದು ಗುರುತಿಸಲಾಗಿದೆ. ಮನೆಯ ಆರ್ಥಿಕ ಒತ್ತಡದಿಂದ ಮನನೊಂದು ಈಕೆ ಸೂಸೈಡ್ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.