ಬೆಂಗಳೂರು : ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ಪ್ರಿಯಾಂಕಾ (19) ಎಂಬ ವಿದ್ಯಾರ್ಥಿನಿ ನಗರದಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಮನೆಯ ಟೆರೇಸ್ ನಲ್ಲಿ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.