ಬೆಂಗಳೂರು : 12 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸೂಸೈಡ್ ಮಾಡಿಕೊಂಡ ಘಟನೆ ಬೆಂಗಳೂರಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಗೆಳತಿ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಮಾಯಾಂಕ್ ರಜನಿ ಎಂಬ ಯುವಕ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಶುರು ಮಾಡಿಕೊಂಡಿದ್ದನು ಎನ್ನಲಾಗಿದೆ. ಕೂಡ್ಲುಗೇಟ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಯುವಕ 12 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.