ವಿಜಯಪುರ : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಎನ್ ಹೆಚ್-50 ರಲ್ಲಿ ಈ ಅಪಘಾತ ಸಂಭವಿಸಿದೆ.ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಗೊಂಡವರನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.