ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.
ಯಾದರಿಗಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿಯಲ್ಲಿ ಈ ಘಟನೆ ನಡೆದಿದೆ. ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.