ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಕಾರಿಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಗದಂಪುರ ಬಳಿ ನಡೆದಿದೆ.
ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಅವಿನಾಶ್, ಅಭಿಷೇಕ್, ಸಂಜೀವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೀದರ್ ನಿಂದ ತೆಲಂಗಾಣದ ಧಾರೂರ್ ಗೆ ತೆರಳುತ್ತಿದ್ದ ಕಾರು ಹಾಗೂ ತೆಲಂಗಾಣದಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .