ಕೊಪ್ಪಳ : ಭೀಕರ ಅಪಘಾತ ಸಂಭವಿಸಿ ಇಬ್ಬರು ಸಜೀವ ದಹನಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ನಡೆದಿದೆ.
ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಡಿಕ್ಕಿಯಾಗಿ ಗೂಡ್ಸ್ ವಾಹನಕ್ಕೆ ಬೆಂಕಿ ತಗುಲಿ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ.
ಮೃತರನ್ನು ತೊಡಕಿ ಗ್ರಾಮದ ಸಿದ್ದಪ್ಪ (23) ಹಾಗೂ ಅಂಜನಪ್ಪ (30) ಎಂದು ಗುರುತಿಸಲಾಗಿದೆ. ಮೃತರು ಜಿಲ್ಲೆಯ ತೊಡಗಿ ಗ್ರಾಮದ ಮೂಲದವರು ಎಂದು ಗುರುತಿಸಲಾಗಿದೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.