ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಿಸುವಂತೆ ಲೋಕಾಯುಕ್ತಗೆ ದೂರು ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ ಪಿ ಸುದೇಶ್ ಗೆ ದೂರುದಾರ ಪ್ರದೀಪ್ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಕೋರ್ಟ್ ಆದೇಶದ ಮೇರೆಗೆ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಹೈಕೋಟ್ ಅಸ್ತು ಎಂದಿದೆ. ಈ ನಡುವೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಯೂ ವಿಚಾರಣೆ ನಡೆಯಲಿದೆ. ಮುಡಾ ಹಗರಣ ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಪ್ರಕಟವಾಗುತ್ತಿದ್ದಂತೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ.