ಬೆಂಗಳೂರು : ಎಂಎಲ್’ಸಿ ಸಿಟಿ ರವಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಕರಣಕ್ಕೆ ಮಹಿಳಾ ರಾಜ್ಯ ಆಯೋಗ ಎಂಟ್ರಿ ನೀಡಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಗೆ ಈಗ ಸಂಕಷ್ಟ ಎದುರಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹಿಳಾ ರಾಜ್ಯ ಆಯೋಗ ಇದು ಸಚಿವೆಯ ವಿಚಾರ ಅಲ್ಲ, ಇದು ಒಂದು ಹೆಣ್ಣಿನ ಘನತೆ. ಮರ್ಯಾದೆ ಪ್ರಶ್ನೆ ಎಂದು ಹೇಳಿದೆ. ಸಿಟಿ ರವಿ ವಿರುದ್ಧ ಇಂದು ಆಯೋಗ ದೂರು ದಾಖಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಪೊಲೀಸರು ವೈದ್ಯಕೀಯ ತಪಾಸಣೆ ನಡೆಸಿದ್ದು, ಇಂದು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.