![](https://kannadadunia.com/wp-content/uploads/2021/03/Killer-BMTC.jpg)
ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಸುಬ್ಬಯ್ಯ ಸರ್ಕಲ್ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಕಬ್ಬನ್ ಪೇಟೆಯ ನಿವಾಸಿ ಪುಷ್ಟ ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಬಿಎಂಟಿಸಿ ಬಸ್ ಚಾಲಕ ನಾಗರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.