alex Certify BREAKING : ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ : ನೀರಿನ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ : ನೀರಿನ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದ್ದು, ನೀರಿನ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಲಿಫ್ಟ್ ನಿರ್ಮಿಸಲು ಅಗೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸುಹಾಸ್ ಮೃತಪಟ್ಟ ಘಟನೆ ನಗರದ ಕಾಡುಗೋಡಿಯಲ್ಲಿ ನಡೆದಿದೆ.

ಕಾಡುಗೋಡಿಯ ಕನ್ನಮಂಗಲದಲ್ಲಿ ನಿರ್ಮಾಣದ ಹಂತದ ಕಟ್ಟಡದ ಕಾಮಗಾರಿ ನಡೆಯುತ್ತಿತ್ತು, ಈ ವೇಳೆ ಲಿಫ್ಟ್ ನಿರ್ಮಿಸಲು ಗುಂಡಿಯೊಂದನ್ನು ತೆಗೆಯಲಾಗಿತ್ತು. ಆ ಗುಂಡಿಗೆ ನೀರು ತುಂಬಿತ್ತು. ಆಟವಾಡುತ್ತಾ ಹೋದ ಬಾಲಕ ಈ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಕೆಂಗೇರಿ  ಕೆರೆಯಲ್ಲಿ ಮುಳುಗಿ ಅಣ್ಣ-ತಂಗಿ ಇಬ್ಬರು ಮೃತಪಟ್ಟಿದ್ದರು . ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...