ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.
ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ (BMTC) ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಲಿಂಗಮ್ಮ ಮೇಲೆ ಬಸ್ ಹರಿದಿದೆ. ಲಿಂಗಮ್ಮ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೆಬ್ಬಾಳದ ಬಸ್ ನಿಲ್ದಾಣದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.