alex Certify BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಯಶವಂತಪುರದಲ್ಲಿ ನಡೆದಿದೆ.

ಎಂಎಸ್ ಪಾಳ್ಯದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಕಾರು ಟಚ್ ಆಗಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ, ಈ ವೇಳೆ ಬರುತ್ತಿದ್ದ ಬಿಎಂಟಿಸಿ ಬಸ್ ಆತನ ಮೇಲೆ ಹರಿದಿದೆ.

ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...