ಬೆಂಗಳೂರು : ಪ್ರೇಮವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಕೊಳ್ಳೆಗಾಲ ಮೂಲದ ನವೀನ್ (27) ಎಂದು ಗುರುತಿಸಲಾಗಿದೆ.ನವೀನ್ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬಾಳೆ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.