ಹಾಸನ : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.
ರೈತ ರವಿ (50) ಎಂಬುವವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಅವರು ಹಲವು ಸಂಘ, ಮೈಕ್ರೋ ಫೈನಾನ್ಸ್ ನಿಂದ ಸುಮಾರು 9 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಅವರು ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.