alex Certify BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು

ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಮಹಿಳೆಯೊಬ್ಬರು ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಮಡಿವಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದ್ದು, 21 ವರ್ಷದ ಸೀಮಾ ಎಂಬ ಮಹಿಳೆ ಬಿಎಂಟಿಸಿ ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸೀಮಾ ಎಂಬ ಮಹಿಳೆ ತನ್ನ ಪತಿ ಹಾಗೂ ಮಕ್ಕಳ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಸೀಮಾ ಮೇಲೆ ಬಸ್ ಹರಿದಿದೆ. ಪರಿಣಾಮ ಸೀಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...