ಹುಬ್ಬಳ್ಳಿ : ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಪತ್ನಿ ಕಿರುಕುಳ ತಾಳಲಾರದೆ ಡೆತ್’ನೋಟ್ ಬರೆದಿಟ್ಟುನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ.
ಪೀಟರ್ ಎಂಬಾತ ಡೆತ್’ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಹಲವು ದಿನಗಳಿಂದ ಪತಿ ಪೀಟರ್, ಪತ್ನಿ ಪಿಂಕಿ ನಡುವೆ ಜಗಳವಾಗುತ್ತಿತ್ತು. ಇದರಿಂದ ಮನನೊಂದು ಪೀಟರ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪತ್ನಿ ಕಿರುಕುಳದಿಂದ ಬೇಸತ್ತು ಸಾಯುತ್ತಿದ್ದೇನೆ ಎಂದು ಪೀಟರ್ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.