ಮೈಸೂರು : ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಸಚಿವ ಕೋಟೆ ಶಿವಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಹೌದು, ಕೋಟೆ ಶಿವಣ್ಣ ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ನಾಳೆ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮಾಜಿ ಸಚಿವ ಕೋಟೆ ಶಿವಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ನಿನ್ನೆಯಷ್ಟೇ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಯಾಗಿದ್ದರು. ನಾಳೆ ಮಾಜಿ ಸಚಿವ ಕೋಟೆ ಶಿವಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.