ತುಮಕೂರು : ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಹೌದು. ತುಮಕೂರಿನ ಪ್ರಭಾವಿ ಮಾಜಿ ಶಾಸಕ ಡಿಸಿ ಗೌರಿಶಂಕರ್ ಜೆಡಿಎಸ್ ಗೆ ಗುಡ್ ಬೈ ಹೇಳಿ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ನಾಳೆ ಬುಧವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಮುನಿಸಿಕೊಂಡಿದ್ದ ಗೌರಿಶಂಕರ್ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಯಾರ ಮನವೊಲಿಕೆಗೂ ಬಗ್ಗದ ಮಾಜಿ ಶಾಸಕರು ತೆನೆ ಇಳಿಸಿ ಕೈ ಹಿಡಿಯಲು ಮುಂದಾಗಿದ್ದಾರೆ. ಈ ಮೂಲಕ ಜೆಡಿಎಸ್ ಶಾಕ್ ಎದುರಾಗಿದೆ.