alex Certify BREAKING : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವು : ಮೃತರ ಸಂಖ್ಯೆ 17 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವು : ಮೃತರ ಸಂಖ್ಯೆ 17 ಕ್ಕೆ ಏರಿಕೆ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17 ಕ್ಕೇರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ (19) ಎಂಬುವವರು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ರಾಜೇಶ್ ತಮಿಳುನಾಡು ಮೂಲದವರಾಗಿದ್ದು, ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು. ಈ ಮೂಲಕ ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17 ಕ್ಕೇರಿಕೆಯಾಗಿದೆ.

ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಒಟ್ಟು 17 ಮಂದಿ ಮೃತಪಟ್ಟಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ರಾಜ್ಯದಲ್ಲಿ ಹಬ್ಬ, ವಿಶೇಷ ಕಾರ್ಯಕ್ರಮದಲ್ಲಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...