ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧವೇ ಆಪ್ತ ಶಿವಕುಮಾರ್ ದೂರು ದಾಖಲಿಸಿದ್ದಾರೆ.
ಶಿವಕುಮಾರ್ ಇಂದು ತಮ್ಮ ನಿಲುವು ಬದಲಾಯಿಸಿಕೊಂಡು ಹೊಳೆನರಸೀಪುರ ಪೊಲೀಸ್ ಠಾಣೆಗೆ ಬಂದು ಸೂರಜ್ ರೇವಣ್ಣ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿವಕುಮಾರ್ ಧಿಡೀರ್ ಆಗಿ ಪ್ರತ್ಯಕ್ಷಗೊಂಡು ಸೂರಜ್ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಶಿವಕುಮಾರ್ ಹೊಳೆನರಸೀಪುರ ತಾಲೂಕಿನ ಹನುಮನಹಳ್ಳಿ ಗ್ರಾಮದವರಾಗಿದ್ದು, ಈ ಹಿಂದೆ ಸೂರಜ್ ಪರವಾಗಿ ಸಂತ್ರಸ್ತನ ವಿರುದ್ಧ ದೂರು ನೀಡಿದ್ದರು . ಇದೀಗ ಶಿವಕುಮಾರ್ ಉಲ್ಟಾ ಹೊಡೆದಿದ್ದಾರೆ.