ನವದೆಹಲಿ : ದೆಹಲಿಯ ವಿಧಾನಸಭಾ ಚುನಾವಣೆ ಎಎಪಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಗಡಿ ದಾಟಿದೆ ಹಾಕುತ್ತಿದೆ.
2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್ 28, ಕಾಂಗ್ರೆಸ್ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್ಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಕೇಜಿವಾಲ್ ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.
ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಶಕ್ತಿಮೀರಿ ಪ್ರಯತ್ನ ನಡೆಸಿದೆ .ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಪ್ರಚಾರ ಮಾಡಿದ್ದ ಅಪ್ ಬರಪೂರ ಉಚಿತ ಯೋಜನೆಗಳನ್ನು ಘೋಷಿಸಿದೆ. ಇನ್ನು ಒಂದಿಷ್ಟು ಸೀಟ್ಗಳನ್ನಾದರೂ ಗೆದ್ದು ಪ್ರತಿಷ್ಠೆ ಮರು ಸ್ಥಾಪಿಸುವ ಕಾಂಗ್ರೆಸ್ ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ. ಆದರೆ ಸದ್ಯದ ಚುನಾವಣಾ ಫಲಿತಾಂಶವನ್ನು ನೋಡಿದರೆ ಕಾಂಗ್ರೆಸ್ಗೆ ಮತ್ತೆ ಹಿನ್ನಡೆಯಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತದೆ.