ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ.
ಏಷ್ಯನ್ ಗೇಮ್ಸ್ ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಸರಬ್ಜೋತ್ ಸಿಂಗ್ ಹಾಗೂ ದಿವ್ಯ ಅವರು ಭರ್ಜರಿ ಪ್ರದರ್ಶನದ ಮೂಲಕ ಬೆಳ್ಳಿ ಪದಕ ಪಡೆದಿದ್ದಾರೆ.
10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸಿಂಗ್ ಮತ್ತು ಟಾಪ್ಸ್ ಚೆಮ್ ಅಥ್ಲೀಟ್ ದಿವ್ಯಾ ಬೆಳ್ಳಿ ಗೆದ್ದರು.ಈ ಮೂಲಕ ಭಾರತ ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ನಲ್ಲಿ 19 ಪದಕಗಳೊಂದಿಗೆ ಪದಕಗಳ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.