ಬೆಂಗಳೂರು : ರಾಜ್ಯಸಭೆ ಚುನಾವಣೆ ಬಳಿಕ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ನ ನಾಸೀರ್ ಹುಸೇನ್ ಬೆಂಬಲಿಗ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಇಂದು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಫಿಸಿ ವಿಪಕ್ಷ ಬಿಜೆಪಿ ಗದ್ದಲ ಮಾಡಿದ್ದು, ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಗಿದೆ.
ಇನ್ನು ವಿಧಾನಸೌಧದಲ್ಲಿ ಪಾಕಿಸ್ತಾನದ ಜಿಂದಾಬಾದ್ ಘೋಷಣೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನಿಸಿದ್ದಾರೆ. ಈ ವೇಳೆ ಯುವ ಮೊರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.