ಬೆಂಗಳೂರು : ವಿಧಾನಸಭೆ ಉಪಚುನಾವಣೆ ಹಿನ್ನೆಲೆ ನ.13 ರಂದು ರಾಜ್ಯ ಸರ್ಕಾರ ವೇತನ ಸಹಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ದಿನಾಂಕ:13.11.2024ರ ಬುಧವಾರದಂದು 83-ಶಿಗ್ಗಾಂವ್, 95-ಸಂಡೂರ್ ಮತ್ತು 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ(ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೇ ಔಧ್ಯಮಿಕ ) (Business, trade, Industrial Undertaking or any other establishment) ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ಅನುಕೂಲವಾಗುವಂತೆ Negotiable Instrument Act 1881, ಕಲಂ 25ರಡಿ ಮತ್ತು Representation of People Act, 1951 0 135 ಬಿ ಅಡಿಯಲ್ಲಿನ ಎಲ್ಲಾ ಉಪಬಂದಗಳನ್ನಯ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂಬ ಷರತ್ತಿಗೊಳಪಟ್ಟು ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಈ ಮೂಲಕ ಆದೇಶಿಸಿದೆ.