
ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.
ಆರಂಭಿಕ ಮತ ಎಣಿಕೆಯಲ್ಲಿ ರಾಜಸ್ಥಾನ ರಾಜ್ಯದಲ್ಲಿ ಬಿಜೆಪಿ 46 ರಲ್ಲಿ ಮುನ್ನಡೆ ಸಾಧಿಸಿದ್ರೆ, 39 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ರೆ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 44, ಬಿಜೆಪಿ 51 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಆರ್ ಎಸ್ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ, ಬಿಜೆಪಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.