ಬೆಂಗಳೂರು : ವಿಧಾನಸಭಾ ಕಲಾಪ ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಪೀಕರ್ ಯುಟಿ ಖಾದರ್ ವಿಧಾನಸಭಾ ಕಲಾಪವನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಿನ್ನೆಯಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದೆ. ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ನಾಳೆ ಕಲಾಪ ಇರುವುದಿಲ್ಲ. ಆದ್ದರಿಂದ ಕಲಾಪವನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ನಾಳಿನ ವಿಧಾನಸಭೆ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನಡೆಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.