ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ.
ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಬಿಜೆಪಿ ಎಸ್ ಟಿ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಮೂವರು ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಇದೀಗ ಮೂವರಲ್ಲಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅಮಾನತುಗೊಂಡವರು.