alex Certify BREAKING : ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2023 ಆಗಿತ್ತು.

ಆದರೆ ಇದೀಗ ಜನವರಿ 6 ರವರೆಗೆ ಪ್ರವೇಶಾತಿ ಅವಧಿ ವಿಸ್ತರಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ.

2023-24ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳ ಮೂಲಕ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 07.12.2023 ರ ಬೆಳಿಗ್ಗೆ 11.00 ರಿಂದ 31.12.2023 ರವರೆಗೆ ವಿಸ್ತರಿಸಲಾಗಿತ್ತು.
ನಂತರ ಇದೀಗ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು 06.01.2024 ರ ವರೆಗೆ ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸಲಾಗಿದೆ.ಇಲ್ಲಿಯವರೆಗೆ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು 06.01.2024 ರ ವರೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...