ಬೆಂಗಳೂರು : ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಅನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತು ಮಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಸ್ಥಳ ಪರಿಶೀಲನೆ ನಡೆಸದೆ ಪಟಾಕಿ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.
ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತಕ್ಕೆ ಇಡೀ ರಾಜ್ಯವೇ ಮರುಗಿದ್ದು, ಘೋರ ದುರಂತದಲ್ಲಿ 14 ಮಂದಿ ಸುಟ್ಟು ಕರಕಲಾಗಿದ್ದಾರೆ. ಅತ್ತಿಬೆಲೆಯ ಬಾಲಾಜಿ ಪಟಾಲಿ ಅಂಗಡಿಗೆ ಬೆಂಕಿ ಬಿದ್ದು 14 ಮಂದಿ ಸಜೀವ ದಹನವಾಗಿದ್ದು, ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಎಚ್ಚೆತ್ತ ಸರ್ಕಾರ ಪಟಾಕಿ ಬ್ಯಾನ್ ಮಾಡಿದೆ.