ಬಿಹಾರದ ಅರಾರಿಯಾದಲ್ಲಿ ಹಾಡಹಗಲೇ ಬ್ಯಾಂಕ್ ದ ರೋಡೆ ನಡೆದಿದ್ದು, ಶಸ್ತ್ರಾಸ್ತ್ರಗಳೊಂದಿಗೆ ಬಂದ ಆರು ಮಂದಿ ದುಷ್ಕರ್ಮಿಗಳು ಬ್ಯಾಂಕಿನಿಂದ 90 ಲಕ್ಷ ರೂ.ಗಳನ್ನು ಲೂಟಿ ಮಾಡಿದ್ದಾರೆ.
ನಗರದ ಎಡಿಬಿ ಚೌಕ್ ನಲ್ಲಿರುವ ಆಕ್ಸಿಸ್ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ. ಆರು ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳೊಂದಿಗೆ ಬ್ಯಾಂಕಿಗೆ ಬಂದು ಹೆದರಿಸಿ ಹಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ತಡೆಯಲು ಬಂದಾಗ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ನಂತರ 90 ಲಕ್ಷ ರೂ.ಗಳನ್ನು ಲೂಟಿ ಮಾಡಿ ಎಸ್ಕೇಪ್ ಆಗಿದ್ದಾರೆ.
ಅದೃಷ್ಟವಶಾತ್ ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ. ದರೋಡೆಯ ನಂತರ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದರೋಡೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಸ್ಥಳಕ್ಕೆ ತಲುಪಿದರು.
ದರೋಡೆಕೋರರು ಗ್ರಾಹಕರನ್ನು ಬಂದೂಕು ತೋರಿಸಿ ಬ್ಯಾಂಕಿನಲ್ಲಿ ಒತ್ತೆಯಾಳುಗಳಾಗಿ ಇಟ್ಟುಕೊಂಡು ಕೋಣೆಯಲ್ಲಿ ಲಾಕ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಅವರನ್ನು ಬೆದರಿಸಲು ಅವರು ಗುಂಡು ಹಾರಿಸಿದರು ಎಂದು ಹೇಳಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.