ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದ್ದು, ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾಜಿ ಸಿಎಂ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದೆ.
ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಗೆ ಉತ್ತರ ನೀಡಿರುವ ಯಡಿಯೂರಪ್ಪ ಜೂನ್ 17ರಂದು ವಿಚರಣೆಗೆ ಹಾಜರಾಗುವುದುದಾಗಿ ತಿಳಿಸಿದ್ದಾರೆ.ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ ಹಿನ್ನೆಲೆಯಲ್ಲಿ ಅರೆಸ್ಟ್ ವಾರೆಂಟ್ ಜಾರಿಮಾಡುವಂತೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.