ಚಿಕ್ಕಮಗಳೂರು : ಬಾಬಾಬುಡನ್ ಗಿರಿ ದರ್ಗಾದಲ್ಲಿ ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಜೆಎಂಎಫ್ ಸಿ ಕೋರ್ಟ್ ಫೆ.7 ಕ್ಕೆ ವಿಚಾರಣೆ ಮುಂದೂಡಿದೆ.
ಬಾಬಾಬುಡನ್ ಗಿರಿ ದರ್ಗಾದಲ್ಲಿ ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗಾಗಿ 12 ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದರು. 14 ಆರೋಪಿಗಳ ಪೈಕಿ 12 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.
2017ರಲ್ಲಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಜಯಂತಿ ವೇಳೆ ಗೋರಿ ಧ್ವಂಸಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ 14 ಮಂದಿಯ ವಿರುದ್ಧ ಕೇಸ್ ದಾಖಲಾಗಿತ್ತು.. ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಜೆಎಂಎಫ್ ಸಿ ಕೋರ್ಟ್ ಫೆ.7 ಕ್ಕೆ ವಿಚಾರಣೆ ಮುಂದೂಡಿದೆ.