ಬೆಂಗಳೂರು :ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಹಕ್ಕಿಜ್ವರದ ಗುಣಲಕ್ಷಣ ಇರುವವರೆಗೆ RTPCR ಟೆಸ್ಟ್ ಕಡ್ಡಾಯ ಎಂದು
ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದ ಹಲವು ಕಡೆ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಎಚ್ಚರಿಕೆ ವಹಿಸಲಾಗಿದೆ. ಹಕ್ಕಿಜ್ವರ ಕಂಡುಬಂದ 3 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಸೂಚನೆ ನೀಡಿದ್ದಾರೆ. ಹಾಗೂ ಸಾರ್ವಜನಿಕರು ಚೆನ್ನಾಗಿ ಬೇಯಿಸಿದ ಮಾಂಸವನ್ನು ಮಾತ್ರ ತಿನ್ನುವಂತೆ ಸೂಚನೆ ನೀಡಿದ್ದಾರೆ.
* ಹಕ್ಕಿ ಜ್ವರ ಕಂಡುಬಂದ ಜಾಗದಿಂದ 3 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ.
* ಪೌಲ್ಟ್ರಿಯಲ್ಲಿ ಕೆಲಸ ಮಾಡುವವರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
* ಜ್ವರ ಕಾಣಿಸಿಕೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
* ಕೋಳಿ ಮಾಂಸ ಧರಿಸುವಾಗ ಮಾಸ್ಕ್, ಗ್ಲೌಸ್ ಧರಿಸುವುದು ಕಡ್ಡಾಯ
* ಹಕ್ಕಿಜ್ವರ ಬಂದವರಿಗೆ ಪ್ರತ್ಯೇಕ ವಾರ್ಡ್ ತೆರೆಯಬೇಕು
* ಕೋಳಿ, ಹಕ್ಕಿಗಳ ಜೊತೆ ಇರುವವರಿಗೆ ಔಷಧ ನೀಡಬೇಕು.
*ಹಕ್ಕಿ ಜ್ವರ ಕಂಡು ಬಂದರೆ 10 ಕಿಮೀ ವ್ಯಾಪ್ತಿಯನ್ನು ಸರ್ವೆಲೆನ್ಸ್ ಪ್ರದೇಶ ಎಂಬುದಾಗಿ ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ.